ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹಿರೇಹೊನ್ನಿಹಳ್ಳಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ರವಿವಾರ ಬೆಳಗ್ಗೆ ಅಂತರಾಷ್ಟ್ರೀಯ ಯೋಗ ದಿನವನ್ನು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಯೋಗದ ವಿವಿಧ ಪ್ರಕಾರಗಳನ್ನು ಮಾಡುವುದರ ಮೂಲಕ ವೈಶಿಷ್ಟ ಪೂರ್ಣವಾಗಿ ಅರ್ಥಪೂರ್ಣವಾಗಿ ಆಚರಿಸಿದರು, ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಆಸೀಫ್ ಅಲಿ ನದಾಫ್ ಶಿಕ್ಷಕ ಶಿಕ್ಷಕಿಯರು, ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು, ಮಕ್ಕಳಿಂದ ಪ್ರಾರ್ಥನಾ ಗೀತೆ ,ಯೋಗ ದಿನದ ಮಹತ್ವ ಹಾಗೂ ಯೋಗದ ಉಪಯೋಗಗಳನ್ನು ತಮ್ಮ ಅನಿಸಿಕೆಗಳ ಮೂಲಕ ತಿಳಿಸಿಕೊಟ್ಟರು.





