ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ 2026

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026
ಜು.4 ರಂದು ಶೇ. 47.12 ಮತದಾರರಿಗೆ ಗಣತಿ ನಮೂನೆಗಳ ವಿತರಣೆ

ಧಾರವಾಡ (ಕರ್ನಾಟಕ ವಾರ್ತೆ) ಜು.3: ಭಾರತ ಚುನಾವಣಾ ಆಯೋಗದ ಸೂಚನೆ ಮೆರೆಗೆ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದಂತೆ, ಧಾರವಾಡ ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರಗಳ ಮತಗಟ್ಟೆ ಮಟ್ಟದ ಅಧಿಕಾರಿಗಳು (BLOs) ಜೂನ್ 30, 2026 ರಿಂದ ಜುಲೈ 29, 2026 ರವರೆಗೆ ಮತದಾರರ ಮನೆ-ಮನೆಗಳಿಗೆ ಭೇಟಿ ನೀಡಿ, ಏಣಿಕೆ, ಗಣತಿ ನಮೂನೆಗಳನ್ನು (Enumeration Forms) ವಿತರಣೆ ಮಾಡಲಾಗುತ್ತಿದ್ದು, ಧಾರವಾಡ ಜಿಲ್ಲೆಯ ಮತಗಟ್ಟೆ ಮಟ್ಟದ ಅಧಿಕಾರಿಗಳು ಜುಲೈ 04, 2026 ರಂದು ಶೇ. 47.12 ಮತದಾರರಿಗೆ ಗಣತಿ ನಮೂನೆಗಳನ್ನು ವಿತರಣೆ ಮಾಡಿದ್ದಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ.

69-ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಶೇ. 76.50 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ. 0.62 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ. 70-ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಶೇ. 47.17 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ. 0.13 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ. 71-ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ ಶೇ. 41.65 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ. 1.33 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ. 72-ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಶೇ. 40.12 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ.0.17 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ.

73-ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಶೇ. 33.16 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ. 0.27 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ. 74-ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಶೇ. 33.55 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ. 0.62 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ. 75-ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 67.16 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ. 0.84 ಭರ್ತಿ ಮಾಡಿದ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಿದ್ದಾರೆ.

ಒಟ್ಟು 7 ವಿಧಾನ ಸಭಾ ಕ್ಷೇತ್ರದಲ್ಲಿ ಶೇ. 47.12 ನಮೂನೆಗಳನ್ನು ಮತದಾರರಿಗೆ ವಿತರಣೆ ಮಾಡಿ, ಶೇ. 0.57 ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಮತದಾರರಿಂದ ಸ್ವೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.
ಮತಗಟ್ಟೆ ಮಟ್ಟದ ಅಧಿಕಾರಿಗಳು ಮತದಾರರ ಮನೆ-ಮನೆಗಳಿಗೆ ಭೇಟಿ ನೀಡಿದ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರು, ಮತದಾರರು ತಮ್ಮ ಅವಶ್ಯಕ ಮಾಹಿತಿಗಳನ್ನು ಭರಣಾ ಮಾಡಿದ ಏಣಿಕೆ, ಗಣತಿ ನಮೂನೆಗಳನ್ನು (Enumeration Forms) BLO ರವರಿಗೆ ನೀಡಿ ಸಹಕರಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *